ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಬೆಳಗಾವಿ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಗಲಭೆ ಸೃಷ್ಟಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಪ್ರಕರಣದಲ್ಲಿ 27 ಆರೋಪಿಗಳನ್ನು ಬಂಧಿಸಲಾಗಿತ್ತು. ವೈದ್ಯಕೀಯ ತಪಾಸಣೆಯ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.