ಕೋಟಾ : ಅಪ್ರಾಪ್ತೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದ 13 ಜನ ಆರೋಪಿಗಳಿಗೆ ತಲಾ 20 ವರ್ಷ ಜೈಲು ಶಿಕ್ಷೆ ವಿಧಿಸಿ ರಾಜಸ್ಥಾನದ ಕೋಟಾ ನ್ಯಾಯಾಲಯ ಆದೇಶ ನೀಡಿದೆ.
15 ವರ್ಷದ ಅಪ್ರಾಪ್ತೆಯ ಮೇಲೆ ಪಾಪಿಗಳು 9 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯು, ಪೂಜಾ ಜೈನ್ ಅಲಿಯಾಸ್ ಬುಲ್ಬುಲ್ ಎಂಬ ಮಹಿಳೆ ನನಗೆ ಆಮಿಷವೊಡ್ಡಿ ಜಲಾವರ್ ಗೆ ಕರೆದುಕೊಂಡು ಹೋಗಿದ್ದಳು. ಅಲ್ಲಿ 9 ದಿನಗಳ ಕಾಲ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಯಿತು ಎಂದು ದೂರು ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಾ ಪೊಲೀಸರು ಮೇ. 7ರಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣವನ್ನು ತ್ವರಿತವಾಗಿ ನಡೆಸಿರುವ ಕೋರ್ಟ್ ತೀರ್ಪು ಪ್ರಕಟಿಸಿದೆ.
ಬುರ್ಜ್ ಖಲೀಫಾ ಕಟ್ಟಡದ ಮೇಲೆ ’83’ರ ಝಲಕ್ ಬಿತ್ತರಿಸಿದ ಚಿತ್ರತಂಡ
ನಾಲ್ವರು ಅಪ್ರಾಪ್ತ ಅಪರಾಧಿಗಳು ಸ್ಥಳೀಯ ಬಾಲ ನ್ಯಾಯ ಮಂಡಳಿಯಲ್ಲಿ ಪ್ರತ್ಯೇಕವಾಗಿ ಈ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಅಲ್ಲದೇ, ಇಬ್ಬರಿಗೆ ಈ ಪ್ರಕರಣದಲ್ಲಿ ನಾಲ್ಕು ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಆರೋಪಿಗಳಿಗೆ ದಂಡ ಕೂಡ ಹಾಕಲಾಗಿದೆ. ಬಾಲಕಿಯನ್ನು ಅಪಹರಿಸಿ ಅತ್ಯಾಚಾರಿಗಳಿಗೆ ಮಾರಾಟ ಮಾಡಿದ್ದ ಮಹಿಳೆಗೆ ನಾಲ್ಕು ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗಿದೆ.
ಪೋಕ್ಸೊ ಕಾಯ್ದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶೋಕ್ ಚೌಧರಿ ತೀರ್ಪು ನೀಡಿದ್ದಾರೆ.