ಬೆಳಗಾವಿ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಿ ಜಾರಿಗೊಳಿಸುವ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಂಪುಟ ಒಪ್ಪಿಗೆ ಪಡೆಯಬೇಕಿರುವುದರಿಂದ ಇಂದಿನ ಸಂಪುಟ ಸಭೆ ಕುತೂಹಲ ಮೂಡಿಸಿದೆ. ಉಭಯ ಸದನಗಳಲ್ಲಿ ಕಾಯ್ದೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆ ಇದೆ. ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು, ಒಂದೆರಡು ದಿನಗಳಲ್ಲಿ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.