ಬೆಳಗಾವಿ: ಎಂಇಎಸ್ ಪುಂಡಾಟದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ಸುವರ್ಣ ವಿಧಾನಸೌಧ ಚಲೋ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಕರವೇ ಕಾರ್ಯಕರ್ತರನ್ನು ಬೆಳಗಾವಿ ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ತಡೆದಿದ್ದಾರೆ. ನಾಕಾ ಬಂದಿ ಹಾಕಲಾಗಿದ್ದರೂ ಸುವರ್ಣ ಸೌಧದತ್ತ ಧಾವಿಸುತ್ತಿದ್ದ ಪ್ರತಿಭಟನಾ ನಿರತರನ್ನು ತಡೆದ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ನಾವು ಸರ್ಕಾರ ಹಾಗೂ ಪೊಲೀಸರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಹೋರಾಟವನ್ನು ಹತ್ತಿಕ್ಕುವ ಯತ್ನ ಬೇಡ ಪ್ರತಿಭಟನೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಹೋರಾಟಗಾರರ ಮನವಿ ಒಪ್ಪದ ಪೊಲೀಸರು ನಿಷೇಧಾಜ್ಞೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಹುತೇಕ ಲಸಿಕೆಗಳು ಒಮಿಕ್ರಾನ್ ವಿರುದ್ಧ ಕೆಲಸ ಮಾಡಲ್ಲ: ಪ್ರಾಥಮಿಕ ಅಧ್ಯಯನ ವರದಿಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ
ಈ ವೇಳೆ ಮಾತನಾಡಿದ ಪ್ರವೀಣ್ ಶೆಟ್ಟಿ, ಎಂಇಎಸ್ ಪುಂಡರ ವಿರುದ್ಧ ನಾವು ಹೋರಾಡುತ್ತಿದ್ದೇವೆ. ರಾಜ್ಯ ಸರ್ಕಾರ, ಪೊಲೀಸರಿಗೆ ಬೆಂಬಲವಾಗಿ ಬಂದ ನಮ್ಮನ್ನು ಪೊಲೀಸರು ತಡೆದು ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆ. ಶೀವಸೇನೆ, ಎಂಇಎಸ್ ಪುಂಡರು ಪೊಲೀಸರ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ ಆದರೂ ಶಾಸಕರು, ಸಚಿವರು, ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಇವರ ಪರ ಹೋರಾಟ ನದೆಸಿದರೆ ನಮ್ಮನ್ನೇ ಬಂಧಿಸುತ್ತಿದ್ದಾರೆ. ಸರ್ಕಾರದ ಈ ಕ್ರಮ ಖಂಡನೀಯ ಇಡೀ ಕರ್ನಾಟಕವೇ ಬಂದ್ ಆಗುತ್ತೆ ಹುಷಾರ್ ಎಂದು ಎಚ್ಚರಿಸಿದ್ದಾರೆ.
ಎಲ್ಲಾ ಸಂಘಟನೆಗಳು ಸೇರಿ ಬುಧವಾರ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.