ಬೆಳಗಾವಿ(ಸುವರ್ಣಸೌಧ): ರಾಜ್ಯದ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
7 ಸಾವಿರ ಹುದ್ದೆಗಳು ಖಾಲಿ ಉಳಿದಿದ್ದು, ಇವುಗಳ ನೇಮಕಾತಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದಾಗ, ಪ್ರತಿಕ್ರಿಯೆ ನೀಡಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.