ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಡಿಸೆಂಬರ್ ಅಂತ್ಯದೊಳಗೆ ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರ ನೀಡಲಿದ್ದು, 2022ರ ಜನವರಿ 15 ರೊಳಗೆ ಮನೆ ಹಾನಿ ಪರಿಶೀಲಿಸಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.