ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಜು ಗುರವ್, ಸಚಿನ್ ಗುರವ್ ಮತ್ತು ಗಣೇಶ್ ಪೆಡ್ನೇಕರ್ ಅವರನ್ನು ಬಂಧಿಸಲಾಗಿದೆ. ಮೊನ್ನೆ ರಾತ್ರಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಲಾಗಿತ್ತು. ಗ್ರಾಮಸ್ಥರು, ಪೊಲೀಸರು ಸುಟ್ಟ ಧ್ವಜ ತೆಗೆದು ಬೇರೆ ಧ್ವಜ ಅಳವಡಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.