alex Certify ರಾಜ್ಯದಲ್ಲಿ 295 ಜನರಿಗೆ ಸೋಂಕು, ಉತ್ತರ ಕನ್ನಡದಲ್ಲಿ ಕೊರೋನಾ ಹೆಚ್ಚಳ: ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 295 ಜನರಿಗೆ ಸೋಂಕು, ಉತ್ತರ ಕನ್ನಡದಲ್ಲಿ ಕೊರೋನಾ ಹೆಚ್ಚಳ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 295 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 290 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 30,02,944 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,295 ಸೋಂಕಿತರು ಮೃತಪಟ್ಟಿದ್ದಾರೆ. 29,57,546 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7074 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 204 ಜನರಿಗೆ ಸೋಂಕು ತಗುಲಿದ್ದು, 171 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5691 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಇಂದು ಕೊರೋನಾ ಸಾವಿನ ವರದಿಯಾಗಿಲ್ಲ.

ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 204, ಮೈಸೂರು 10 ಹಾಗೂ ಉತ್ತರ ಕನ್ನಡದಲ್ಲಿ 30 ಹೊಸ ಪ್ರಕರಣ ವರದಿಯಾಗಿವೆ.

ಚಿಕ್ಕಬಳ್ಳಾಪುರ, ಹಾಸನ, ಕಲಬುರಗಿಯಲ್ಲಿ ತಲಾ ಒಬ್ಬರು ಹಾಗೂ ಕೊಡಗು ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...