alex Certify ಆಂಟಿಯೊಂದಿಗೆ ಪರಾರಿಯಾದ ಯುವಕ: ದೂರು ನೀಡಿದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಟಿಯೊಂದಿಗೆ ಪರಾರಿಯಾದ ಯುವಕ: ದೂರು ನೀಡಿದ ತಾಯಿ

ಶಿವಮೊಗ್ಗ: ಮಹಿಳೆಯೊಬ್ಬಳು ಯುವಕನನ್ನು ಅಪಹರಿಸಿರುವುದಾಗಿ ಶಿವಮೊಗ್ಗದ ತುಂಗಾ ನಗರ ಠಾಣೆಗೆ ದೂರು ನೀಡಲಾಗಿದೆ.

ಶಿವಮೊಗ್ಗದ ಮಲ್ಲಿಗೆನಹಳ್ಳಿಯ 19 ವರ್ಷದ ಯುವಕನನ್ನು ಮದುವೆಯಾಗುವ ಉದ್ದೇಶದಿಂದ ಮಹಿಳೆ ತಮಿಳುನಾಡಿಗೆ ಕರೆದುಕೊಂಡು ಹೋಗಿದ್ದಾಳೆ. ಮಹಿಳೆಗೆ ಕೆಲ ವರ್ಷಗಳ ಹಿಂದೆ ಪತಿ ಮೃತಪಟ್ಟಿದ್ದು, ಯುವಕನೊಂದಿಗೆ ಗೆಳೆತನ ಬೆಳೆಸಿದ್ದಳು. ಮದುವೆಯಾಗಲು ತಮಿಳುನಾಡಿನಲ್ಲಿರುವ ತನ್ನ ತವರುಮನೆಗೆ ಯುವಕನನ್ನು ಕರೆದುಕೊಂಡು ಹೋಗಿದ್ದಾಳೆ ಎಂದು ಹೇಳಲಾಗಿದೆ.

ಡಿಸೆಂಬರ್ 10 ರಂದು ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಮಗ ವಾಪಸ್ ಬಂದಿಲ್ಲ. ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಯುವಕನ ತಾಯಿ ತುಂಗಾನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...