ಹೊಸಪೇಟೆ: ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ವಶಕ್ಕೆ ಪಡೆಯಲಾಗಿದೆ.
ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಜನರನ್ನು ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳದ ವೆಂಕಟೇಶ್, ಅಬ್ದುಲ್ ವಹಾಬ್, ಮಹೇಶ್, ಭಟ್ಕಳದ ಗಣಪತಿ, ಹುಬ್ಬಳ್ಳಿಯ ಪುಂಡಲೀಕ, ವಿಜಯಪುರದ ಶ್ರೀಧರ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಒಂದೂವರೆ ಕೆಜಿಯಷ್ಟು ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.