ಭೋಪಾಲ್: ಮಧ್ಯಪ್ರದೇಶದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೊರೋನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.
ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನ ಗುಂಪುಗೂಡಿ ಸೋಂಕು ಸ್ಪೋಟಗೊಳ್ಳುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮುಂದಿನ ಆದೇಶದವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.