ಬೆಂಗಳೂರು: ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸದೇ ವಿನಾಕಾರಣ ನಾಯಕತ್ವದ ಬಗ್ಗೆ ಹರಡುವ ಮೂಲಕ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಸಚಿವರಿಗೆ ಗೇಟ್ ಪಾಸ್ ನೀಡಲು ಬಿಜೆಪಿ ಮುಂದಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಕೆಲವು ಸಚಿವರು ತಮಗೆ ನೀಡಿದ ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದೇ, ಅನಗತ್ಯವಾಗಿ ವದಂತಿ ಹರಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ. ಮುಂದಿನ ಚುನಾವಣೆವರೆಗೂ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮುಂದುವರೆಯಲಿದ್ದಾರೆ ಎಂದು ವರಿಷ್ಠರು ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಹೀಗಿದ್ದರೂ, ಕೆಲವು ಸಚಿವರು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಈ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದ ಬಿಜೆಪಿ ವರಿಷ್ಠರು ವದಂತಿ ಹರಡುವ ಸಚಿವರಿಗೆ ಗೇಟ್ ಪಾಸ್ ನೀಡಲು ನಿರ್ಧರಿಸಿದ್ದಾರೆ. ಸಂಕ್ರಾಂತಿ ವೇಳೆಗೆ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ಅನೇಕ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.