ಬೆಳಗಾವಿ: ವಿಧಾನ ಪರಿಷತ್ ನಲ್ಲಿ ನಡೆದ ಹೈಡ್ರಾಮಾದಿಂದ ಬೇಸತ್ತ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ.
ಬೇಸರಗೊಂಡ ಸಭಾಪತಿಗಳು ರಾಜೀನಾಮೆ ಪತ್ರ ಸಿದ್ಧಪಡಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ನಡೆದ ಬೆಳವಣಿಗೆಗಳಿಂದ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ. ಪರಿಷತ್ ಕಲಾಪ ಮುಂದೂಡಿದ ನಂತರ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸಭಾಪತಿ ಹೊರಟ್ಟಿ ಅವರ ರಾಜೀನಾಮೆ ಬಗ್ಗೆ ಮಾಹಿತಿ ತಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್. ಪಾಟೀಲ್ ಮತ್ತು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಮನವೊಲಿಸಿದ್ದಾರೆ ಎನ್ನಲಾಗಿದೆ.