ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್ ನಡೆಸಲಾಗಿದೆ. ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಶೋಪಿಯಾನ್ ನಲ್ಲಿ ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಸುತ್ತುವರೆದಿದ್ದು, ಶರಣಾಗಲು ಸೂಚನೆ ನೀಡಲಾಗಿದೆ. ಈ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ತೀವ್ರಗೊಳಿಸಿದ ಭದ್ರತಾ ಪಡೆ ಯೋಧರು ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರ ಪತ್ತೆಯಾಗಿವೆ. ಇನ್ನೂ ಹಲವರು ಈ ಪ್ರದೇಶದಲ್ಲಿ ಅವಿತಿರುವ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎನ್ನಲಾಗಿದೆ.