ಮಡಿಕೇರಿ: ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಕೋಲಾರ ಮೆಡಿಕಲ್ ಕಾಲೇಜಿನ ಬೆನ್ನಲ್ಲೇ ಇದೀಗ ಕೊಡಗು ಜಿಲ್ಲೆಯ ಖಾಸಗಿ ಶಾಲೆಯಲ್ಲಿ 26 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ.
ಕೊಡಗಿನ ಕುಶಾಲನಗರದಲ್ಲಿರುವ ಜ್ಞಾನಗಂಗಾ ವಸತಿ ಶಾಲೆಯ 26 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಿಮ್ಮಪ್ಪನ ವಿಶೇಷ ದರ್ಶನದ 4.60 ಲಕ್ಷ ಟಿಕೆಟ್ ಕೇವಲ 80 ನಿಮಿಷಗಳಲ್ಲಿ ಬುಕ್….!
ವಸತಿ ಶಾಲೆಯಲ್ಲಿ 600ಕ್ಕೂ ಹೆಚ್ಚು ಮಕ್ಕಳಿದ್ದು, 385 ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ 26 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿಗಳಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಎಲ್ಲಾ ವಿದ್ಯಾರ್ಥಿಗಳು ಆರೋಗ್ಯದಿಂದ ಇದ್ದಾರೆ ಎಂದು ತಿಳಿಸಿದ್ದಾರೆ.