ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆಯ ಮಾತುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಇದೊಂದು ಕಪೋಲಕಲ್ಪಿತ ಸುದ್ದಿ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕಟೀಲ್, ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. 2023ರ ಚುನಾವಣೆವರೆಗೆ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಸರ್ಕಾರದಲ್ಲಿ ಅರಾಜಕತೆ ಹುಟ್ಟುಹಾಕಲು ಇಂತಹ ಸುದ್ದಿ ಹಬ್ಬಿಸಲಾಗುತ್ತಿದೆ ಎಂದರು.
investment in post office: ಸುರಕ್ಷಿತ ಹೂಡಿಕೆ ಬಯಸಿದ್ರೆ ಅಂಚೆ ಕಚೇರಿಯ ಈ ಯೋಜನೆ ಬೆಸ್ಟ್
ಕಾಂಗ್ರೆಸ್ ನವರೇ ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಜನರಲ್ಲಿ ಗೊಂದಲ ಮೂಡಿಸುವ ದುರುದ್ದೇಶ ವಿಪಕ್ಷ ನಾಯಕರದ್ದಾಗಿದೆ ಎಂದು ಕಿಡಿಕಾರಿದರು. ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವ ಇರುತ್ತದೆ. ಇನ್ನು ಸಚಿವ ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟದ್ದು, ಪುನಾರಚನೆಯಾದರೆ ನಮ್ಮ ಜತೆ ಚರ್ಚಿಸುತ್ತಾರೆ. ಚರ್ಚೆಯಾದರೆ ನಾವು ಮಾಹಿತಿ ನೀಡುತ್ತೇವೆ ಎಂದರು ಹೇಳಿದರು.