ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ಪ್ರಧಾನಿ ಮೋದಿಯವರ ಕನಸು ನನಸು ಮಾಡಲು ಕೊಳಗೇರಿ ಅಭಿವೃದ್ಧಿ ಮಂಡಳಿ ಶ್ರಮಿಸುತ್ತಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 3.40 ಲಕ್ಷ ಮನೆಗಳನ್ನು ನಗರ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕಾಗಿ 4800 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಭಾಗದ ಜನರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ 5 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರ ಬಡವರಿಗೆ ಆಶ್ರಯ ಕಲ್ಪಿಸುವುದರ ಜೊತೆಗೆ ಹಕ್ಕುಪತ್ರ ನೀಡುತ್ತಿದೆ ಎಂದು ಹೇಳಿದ್ದಾರೆ.