alex Certify BIG BREAKIG: 24 ಗಂಟೆಯಲ್ಲಿ ಮತ್ತೆ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 6,450 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKIG: 24 ಗಂಟೆಯಲ್ಲಿ ಮತ್ತೆ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 6,450 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 293 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 480290 ಕ್ಕೆ ಏರಿಕೆಯಾಗಿದೆ.

ಕೈ-ಕಾಲುಗಳಿಲ್ಲದ ದೆಹಲಿಯ ವ್ಯಕ್ತಿಯ ಸ್ಪೂರ್ತಿ ಕಂಡು ಆನಂದ್ ಮಹೀಂದ್ರಾ ಮೆಚ್ಚುಗೆ..!

ಇನ್ನು ದೇಶದಲ್ಲಿ 75456 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6450 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34243945 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,35,495 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,87,547 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,42,46,81,736 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...