ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದಾರೆ. ಕೋವಿಡ್ ಪಾಸಿಟಿವ್ ವರದಿ ಬರುತ್ತಿದ್ದಂತೆಯೇ ಅವರನ್ನು ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಸೌರವ್ ಗಂಗೂಲಿ ಡಬಲ್ ಡೋಸ್ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಆದರೆ ವೃತ್ತಿಪರ ಕಾರ್ಯಗಳ ನಿಮಿತ್ತ ಗಂಗೂಲಿ ವ್ಯಾಪಕವಾಗಿ ಪ್ರಯಾಣ ಮಾಡುತ್ತಿದ್ದರು. ಆರ್ಟಿ ಪಿಸಿಆರ್ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ರಾತ್ರಿ 49 ವರ್ಷದ ಸೌರವ್ ಗಂಗೂಲಿಯನ್ನು ವುಡ್ಲ್ಯಾಂಡ್ಸ್ ನರ್ಸಿಂಗ್ ಹೋಮ್ಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.
ಈ ವರ್ಷದಲ್ಲಿ ಈಗಾಗಲೇ ಗಂಗೂಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಲು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಸೌರವ್ ಗಂಗೂಲಿ ಸಹೋದರ ಸ್ನೇಹಾಶಿಷ್ ಗಂಗೂಲಿ ಸಹ ಕೋವಿಡ್ ಸೋಂಕಿಗೆ ಒಳಗಾಗಿದ್ದರು.