ಮಧ್ಯಾಹ್ನದ ಊಟ ಸೇವಿಸಿದ ಕನಿಷ್ಠ 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರು ತಿಂದ ಆಹಾರದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ವೆಂಕಟಾಪುರ ತಾಂಡಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಸತ್ತ ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿದ್ದ 80 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಎಲ್ಲಾ 80 ಮಕ್ಕಳನ್ನು ರಾಣೆಬೆನ್ನೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸಿಎಂ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಕೋರ್ ಕಮಿಟಿ ಸಭೆ ದಿಢೀರ್ ಮುಂದೂಡಿಕೆ
ಶಾಲೆಯ ಅಧಿಕಾರಿಗಳ ಮಾಹಿತಿ ಪ್ರಕಾರ, ಚಿಕಿತ್ಸೆ ನಂತರ ಮಕ್ಕಳು ಚೇತರಿಸಿಕೊಂಡಿದ್ದು, ಎಲ್ಲಾ ಮಕ್ಕಳನ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಈ ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಈ ರೀತಿಯ ಘಟನೆ ಇದೆ ಮೊದಲಲ್ಲ ಇತ್ತೀಚೆಗೆ, ತಮಿಳುನಾಡಿನ ಸರ್ಕಾರಿ ಶಾಲೆಯೊಂದರಲ್ಲಿ ಹುಳುಗಳ ಸಹಿತ ಕೊಳೆತ ಮೊಟ್ಟೆಗಳು ಪತ್ತೆಯಾಗಿದ್ದವು. ಶಿಶುವಿಹಾರದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಯೋಜನೆಯ ಭಾಗವಾಗಿ ಮೊಟ್ಟೆಗಳನ್ನು ವಿತರಿಸಲಾಗಿತ್ತು.