ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳ ಕುಂದು -ಕೊರತೆ ನಿವಾರಿಸುವ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಜನವರಿ 10 ರೊಳಗೆ ಹಾಸ್ಟೆಲ್ ಗಳ ಕುಂದುಕೊರತೆ ನಿವಾರಣೆ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗುವುದು. ಈ ಕುರಿತಂತೆ ಬಿಎಸ್ಸೆನ್ನೆಲ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಾಯವಾಣಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಹಾಸ್ಟೆಲ್ ಕೊಠಡಿ ಹೆಚ್ಚಳ, ಹಾಸ್ಟೆಲ್ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಆಹಾರಧಾನ್ಯ ಪೂರೈಕೆ ಟೆಂಡರ್ ನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.