ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಡಿಸೆಂಬರ್ 25 ರಂದು ಹಿಮ ಚಿರತೆಯ ವಿಡಿಯೋವೊಂದನ್ನ ಪೋಸ್ಟ್ ಮಾಡಿದಾಗಿನಿಂದ ಟ್ವಿಟರ್‌ನಲ್ಲಿ ಟ್ರೋಲ್ ಆಗ್ತಿದ್ದಾರೆ.
ಇಮ್ರಾನ್ ಖಾನ್ ಪೋಸ್ಟ್ ಮಾಡಿರುವ ಈ ವಿಡಿಯೋ ವೈರಲ್ ಆಗಿದೆ, 4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಹೆಚ್ಚು ಮಹತ್ವದ ವಿಷಯಗಳ ಬಗ್ಗೆ ಮಾತನಾಡುವ ಬದಲು ಅದನ್ನು ಪೋಸ್ಟ್ ಮಾಡಿದ್ದಕ್ಕಾಗಿ ಪಾಕಿಸ್ತಾನದ ಪ್ರಧಾನಿಯನ್ನು ನೆಟಿಜನ್ ಗಳು ಟ್ರೋಲ್ ಮಾಡುತ್ತಿದ್ದಾರೆ. ಹಣದುಬ್ಬರ ಮತ್ತು ಉದ್ಯೋಗಾವಕಾಶಗಳಂತಹ ಗಂಭೀರ ಸಮಸ್ಯೆಗಳ ಬಗ್ಗೆ ಮಾತನಾಡುವ ಬದಲು, ಟೈಮ್ ಪಾಸ್ ಮಾಡ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಹಿಮ ಚಿರತೆಯ 45 ಸೆಕೆಂಡುಗಳ ವಿಡಿಯೋವನ್ನು ಹಂಚಿಕೊಂಡು, ಗಿಲ್ಗಿಟ್-ಬಾಲ್ಟಿಸ್ತಾನ್‌ನ ಖಪ್ಲು ಎಂಬಲ್ಲಿ ಇದನ್ನ ಚಿತ್ರೀಕರಿಸಲಾಗಿದೆ. “ಖಾಪ್ಲು, ಜಿಬಿಯಲ್ಲಿ ನಾಚಿಕೆ ಪಡುವ ಹಿಮ ಚಿರತೆಯ ಅಪರೂಪದ ದೃಶ್ಯಗಳು” ಎಂಬ ಕ್ಯಾಪ್ಷನ್ ನೀಡಿದ್ದರು.
ಈ ಪೋಸ್ಟ್ ನಂತರ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡು, ಕಾಮೆಂಟ್‌ಗಳ ವಿಭಾಗದಲ್ಲಿ ಅವರನ್ನು ಟೀಕಿಸಿದ್ದಾರೆ.
BIG BREAKING: ನೈಟ್ ಕರ್ಫ್ಯೂ ಬೆನ್ನಲ್ಲೇ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ, ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ
“ಈ ಟ್ವೀಟ್ ಅನ್ನು ಕಳುಹಿಸಲು ನಿಮ್ಮ ಸಾಮಾಜಿಕ ಮಾಧ್ಯಮ ನಿರ್ವಾಹಕರನ್ನು ನೀವು ನಿಜವಾಗಿಯೂ ಅನುಮತಿಸಿದ್ದೀರಾ?” ಎಂದು ಒಬ್ಬ ಟ್ವಿಟ್ಟರ್ ಬಳಕೆದಾರ ಕೇಳಿದ್ದಾರೆ.
ಮತ್ತೊಬ್ಬ ಬಳಕೆದಾರರು “ಖಾನ್ ಸಾಹೇಬ್ “ನಿಮ್ಮ ಸ್ವಂತ ವ್ಯವಹಾರವನ್ನು ನೋಡಿಕೊಳ್ಳಿ” ಎಂದು ಕಾಮೆಂಟ್ ಮಾಡಿದ್ದಾರೆ. ಇದು ವನ್ಯಜೀವಿ ಇಲಾಖೆಯ ಕಾರ್ಯವಾಗಿದೆ. ನೀವು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು, ಶ್ರಮದಾಯಕ ಹಣದುಬ್ಬರವನ್ನು ಕಡಿಮೆ ಮಾಡಬೇಕು, ಮೆಗಾ ಯೋಜನೆಗಳನ್ನು ಪ್ರಾರಂಭಿಸಬೇಕು ಮತ್ತು ಜನಸಾಮಾನ್ಯರಿಗೆ ಪರಿಹಾರವನ್ನು ಒದಗಿಸಬೇಕು ಎಂದು ಪಾಕ್ ಜನರು ಇಮ್ರಾನ್ ಖಾನ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.