ರಾಜ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವ ಪ್ಲಾನ್ ಸದ್ಯಕ್ಕಿಲ್ಲ. ಎಲ್ಲರೂ ಒಟ್ಟಾಗಿ ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರದ ಮೇಲೆ ವಿಶ್ವಾಸವನ್ನಿಟ್ಟು ನಿರ್ಧಾರಗಳನ್ನು ಕೈಗೊಂಡ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಧನ್ಯವಾದ ಎಂದು ಹೇಳಿದರು.
ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮುನ್ನಡೆಯಿರಿ ಎಂದು ಬೆನ್ನುತಟ್ಟಿದ್ದಾರೆ. ಬಿಜೆಪಿ ವರಿಷ್ಠರಿಗೆ ರಾಜ್ಯ ಕಾರ್ಯಕಾರಿಣಿ ಸದಸ್ಯರಿಗೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಪಕ್ಷ ಬಲಿಷ್ಠವಾಗಬೇಕೆಂಬ ಅವರ ನಿರೀಕ್ಷೆಯನ್ನು ಹುಸಿಗೊಳಿಸಲ್ಲ. ಮುಂಬರುವ ಚುನಾವಣೆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂಬ ಅವರ ನಿರೀಕ್ಷೆಯನ್ನು ಸಾಕಾರ ಮಾಡ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರು.
ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಅರುಣ್ ಸಿಂಗ್ ಮತ್ತು ಕಟೀಲ್ ನೇತೃತ್ವದಲ್ಲಿ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಇನ್ನು ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸ ವಿಚಾರವಾಗಿ ಇದೇ ವೇಳೆ ಮಾತನಾಡಿದ ಅವರು, ಯಾರಿಗೆ ಎಲ್ಲಿಗೆ ಬೇಕಾದರೂ ಹೋಗುವ ಸ್ವಾತಂತ್ರ್ಯ ಇದೆ ಎಂದು ಹೇಳಿದರು.