ನವದೆಹಲಿ: ಹೊಸ ವರ್ಷದ ಕೊಡುಗೆಯಾಗಿ ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಣವನ್ನು ಬಿಡುಗಡೆ ಮಾಡಲಾಗುವುದು.
2022ರ ಜನವರಿ 1 ರಂದು 20 ಸಾವಿರ ಕೋಟಿ ರೂಪಾಯಿ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. 10 ಕೋಟಿಗೂ ಅಧಿಕಾರ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಇದುವರೆಗೆ 1.6 ಲಕ್ಷ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಜನವರಿ 1 ರಂದು ರೈತರ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆಯ 10 ನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯಡಿ 10ನೇ ಕಂತಿನ ಆರ್ಥಿಕ ಪ್ರಯೋಜನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 1, 2022 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ(ಪಿಎಂಒ) ಬುಧವಾರ ಮಾಹಿತಿ ನೀಡಿದೆ.
ಪಿಎಂಒ ಬಿಡುಗಡೆಯ ಪ್ರಕಾರ, ಇದು 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತ ವರ್ಗಾಯಿಸಲಾಗುವುದು.
PM-KISAN ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ. ಆರ್ಥಿಕ ಪ್ರಯೋಜನ ಒದಗಿಸಲಾಗುತ್ತದೆ, ತಲಾ 2000 ರೂ.ರಂತೆ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ.
ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.