ನವದೆಹಲಿ : ಅಂಡರ್ -19 ಏಷ್ಯಾಕಪ್ ನಲ್ಲಿ ಭಾರತೀಯ ಕಿರಿಯರ ತಂಡ ಫೈನಲ್ ಪ್ರವೇಶಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ.
ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶ ವಿರುದ್ಧ 103 ರನ್ ಗಳಿಂದ ಭರ್ಜರಿಯಾಗಿ ಜಯ ಗಳಿಸಿ ಫೈನಲ್ ಪ್ರವೇಶ ಮಾಡಿತು.
ಸೆಮಿಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ನಿಗದಿತ ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಗಳನ್ನು ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡವು 38.2 ಓವರ್ ಗಳಲ್ಲಿ ಕೇವಲ 147 ರನ್ ಗಳಿಗೆ ಆಲೌಟ್ ಆಗಿ ಸೋಲು ಒಪ್ಪಿಕೊಂಡಿತು.
ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಕೇವಲ 10 ರೂ.ಗೆ LED ಬಲ್ಬ್
ಭಾರತದ ಪರ ಎಸ್. ರಶೀದ್ ಉತ್ತಮ ಬ್ಯಾಟಿಂಗ್ ನಡೆಸಿದ್ದು, 108 ಎಸೆತಗಳಲ್ಲಿ 90 ರನ್ ಸಿಡಿಸಿ ಅಜೇಯರಾಗಿ ಮಿಂಚಿದ್ದಾರೆ. ಭಾರತದ ಬೌಲರ್ ಗಳು ಸಂಘಟಿತ ದಾಳಿ ನಡೆಸಿ, ಬಾಂಗ್ಲಾ ಬ್ಯಾಟ್ಸಮನ್ ಗಳನ್ನು ಕಟ್ಟಿ ಹಾಕಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.
ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಶ್ರೀಲಂಕಾ ಬಗ್ಗು ಬಡಿದು ಫೈನಲ್ ಗೆ ಲಗ್ಗೆಯಿಟ್ಟಿದೆ. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡವು 44.5 ಓವರ್ ಗಳಲ್ಲಿ ಕೇವಲ 147 ರನ್ ಗಳಿಗೆ ಆಲ್ ಔಟ್ ಆಗಿತ್ತು. ಈ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ್ದ ಪಾಕ್ ತಂಡವು ಕೇವಲ 125 ರನ್ ಗಳಿಗೆ ಆಲ್ ಔಟ್ ಆಗಿ ಸೋಲು ಒಪ್ಪಿಕೊಂಡಿತು. ಹೀಗಾಗಿ ಫೈನಲ್ ನಲ್ಲಿ ಭಾರತ ತಂಡವನ್ನು ಶ್ರೀಲಂಕಾ ಎದುರಿಸಲಿದೆ.