ಬೆಂಗಳೂರು: ಜನವರಿ 3ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
15-18 ವರ್ಷದ ಎಲ್ಲಾ ಫಲಾನುಭವಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ಮಾತ್ರ ನೀಡಲಾಗುತ್ತದೆ. ಆರೋಗ್ಯ ಇಲಾಖೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.
ಎರಡನೇ ಡೋಸ್ ಪಡೆದ 39 ವಾರಗಳ ಬಳಿಕ ಅಂದರೆ 9ತಿಂಗಳ ಬಳಿಕ 3ನೇ ಡೋಸ್ ನೀಡಲಾಗುತ್ತದೆ. ಆದರೆ ಎರಡನೇ ಡೋಸ್ ವೈದ್ಯರ ಸಲಹೆ ಮೇರೆಗೆ ಮಾತ್ರ ನೀಡಲಾಗುತ್ತದೆ ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ಮಾಹಿತಿ ನೀಡಿದೆ.
ಓಮಿಕ್ರಾನ್ ನಿಂದಾಗಿ ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ವಿಪರೀತ ಏರಿಕೆ
ಇನ್ನು ಜನವರಿ 10ರಿಂದ ಆರಂಭವಾಗಲಿರುವ ಲಸಿಕೆ ಅಭಿಯಾನದ ಬಗ್ಗೆ ಅರ್ಹ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಂದೇಶ ಕಳುಹಿಸುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.