ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಭಕ್ತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ದೆಹಲಿ, ಹರ್ಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಭಕ್ತರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗೋಪಾಲ್ ದತ್ ಮಾಹಿತಿ ನೀಡಿದ್ದಾರೆ.
ಕಾಲ್ತುಳಿತದಲ್ಲಿ ಭಕ್ತರ ಸಾವಿನ ಸುದ್ದಿ ಕೇಳಿ ಅತೀವ ದುಃಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ. 12 ಭಕ್ತರು ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತದಿಂದ ಮೃತಪಟ್ಟಿದ್ದು, ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಣೆ ಮಾಡಿದ್ದಾರೆ.