ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಎಂಇಎಸ್ ಪುಂಡಾಟ ಪ್ರಕರಣ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದ್ದು, ಪೊಲೀಸ್ ಆಯುಕ್ತ ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಳಗಾವಿ ನಗರ ನೂತನ ಪೊಲೀಸ್ ಆಯುಕ್ತರಾಗಿ ಡಾ.ಬೋರಲಿಂಗಯ್ಯ ಅವರನ್ನು ನೇಮಕ ಮಾಡಲಾಗಿದೆ. ಅಧಿವೇಶನ ಸಂದರ್ಭದಲ್ಲಿನ ಗಲಾಟೆಗೆ ಪೊಲೀಸ್ ವೈಫಲ್ಯವೇ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
BIG NEWS: ದೇಶದಲ್ಲಿ 1400ರ ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ…..!
ಅಧಿವೇಶನದ ವೇಳೆ ನಡೆದಿದ್ದ ಎಂಇಎಸ್ ಪುಂಡಾಟ, ರಾಯಣ್ಣ ಪ್ರತಿಮೆ ಭಗ್ನ, ಭಾಷಾ ಕಿಚ್ಚು ಸೇರಿದಂತೆ ಗಲಾಟೆ ಪ್ರಕರಣ ಸಂಬಂಧ 38 ಜನರನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಬೆಳಗಾವಿ 8ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.