ಬೆಂಗಳೂರು: ಹೊಸ ವರ್ಷದ ಸಂಭ್ರಮದ ಹೊತ್ತಲ್ಲೇ ರಾಜ್ಯದ ಜನತೆಗೆ ಕಂದಾಯ ಸಚಿವ ಆರ್.ಅಶೋಕ್ ಗುಡ್ ನ್ಯೂಸ್ ಕೊಟ್ಟಿದ್ದು, ಆಸ್ತಿ ವಹಿವಾಟು ರೆವಿನ್ಯೂ ವ್ಯಾಲ್ಯೂ ಗೈಡೆನ್ಸ್ ಶೇ.10 ರಷ್ಟು ಕಡಿತಗೊಳಿಸಿರುವುದಾಗಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ಜಮೀನು, ಖರೀದಿ, ಮನೆ, ಸೈಟ್, ಫ್ಲಾಟ್ ಖರೀದಿ ಹೀಗೆ ಯಾವುದೇ ಇರಲಿ. ಜಿಪಿಎ, ಅಗ್ರಿಮೆಂಟ್ ಮಾಡಿಕೊಂಡವರಿಗೆ ರಿಜಿಸ್ಟ್ರೇಷನ್ ಮಾಡಿಕೊಳ್ಳಲು ಶೇ.10 ರಷ್ಟು ಗೈಡೆನ್ಸ್ ವ್ಯಾಲ್ಯೂ ಡಿಸ್ಕೌಂಟ್ ನೀಡಲಾಗುವುದು ಎಂದರು.
ಗಣಿಗಾರಿಕೆ ಪ್ರದೇಶದಲ್ಲಿ ದುರಂತ; 10 ಜನರ ಸಾವು
ಇಂದಿನಿಂದ ರಾಜ್ಯಾದ್ಯಂತ ಈ ನಿಯಮ ಅನ್ವಯವಾಗಲಿದ್ದು, ಇನ್ನು ಮೂರು ತಿಂಗಳವರೆಗೆ ಜಾರಿಯಲ್ಲಿರಲಿದೆ. ಕೋವಿಡ್ ಸೇರಿದಂತೆ ಹಲವು ಸಂಕಷ್ಟಗಳಿಂದ ಸಮಸ್ಯೆ ಎದುರಿಸುತ್ತಿರುವ ಜನರಿಗೆ ಇದರಿಂದ ಅನುಕೂಲವಾಗಲಿದೆ. ಹಾಗಾಗಿ ಸರ್ಕಾರದಿಂದ ಈ ಕೊಡುಗೆ ನೀಡಲಾಗಿದೆ ಎಂದು ಹೇಳಿದರು.