ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ರಾಜ್ಯದ ಜನತೆಗೆ ಶಾಕಿಂಗ್ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ಇವತ್ತು 1000 ಗಡಿದಾಟಿದೆ. ರಾಜ್ಯದಲ್ಲಿ 1033 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
5 ಜನ ಸೋಂಕಿತರ ಮೃತಪಟ್ಟಿದ್ದಾರೆ. 354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.86 ರಷ್ಟು ಇದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗಿದ್ದು, ರಾಜ್ಯದಲ್ಲಿ 9386 ಸಕ್ರಿಯ ಪ್ರಕರಣಗಳು ಇವೆ.
ಒಟ್ಟು ಸೋಂಕಿತರ ಸಂಖ್ಯೆ 30,08,370 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,340 ಜನರು ಮೃತಪಟ್ಟಿದ್ದಾರೆ. 29,60,615 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 810 ಜನರಿಗೆ ಸೋಂಕು ತಗುಲಿದೆ. ಇಬ್ಬರು ಮೃತಪಟ್ಟಿದ್ದಾರೆ 218 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7876 ಸಕ್ರಿಯ ಪ್ರಕರಣಗಳಿವೆ.
ಬಾಗಲಕೋಟೆ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 810, ಬೆಳಗಾವಿ 10, ಚಿಕ್ಕಮಗಳೂರು 10, ದಕ್ಷಿಣ ಕನ್ನಡ 48, ಕೊಡಗು 13, ಮಂಡ್ಯ 23, ಮೈಸೂರು 29, ಉಡುಪಿ 28 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 2, ಮಂಡ್ಯ, ತುಮಕೂರು, ಉತ್ತರಕನ್ನಡದಲ್ಲಿ ತಲಾ 1 ಸೇರಿ ರಾಜ್ಯದಲ್ಲಿ 5 ಜನ ಸೋಂಕಿತರು ಮೃತಪಟ್ಟಿದ್ದಾರೆ.