ನವದೆಹಲಿ: ಹೊಸ ವರ್ಷದ ಮೊದಲ ದಿನವೇ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳ ಖಾತೆಗೆ 2000 ರೂ. ಜಮಾ ಮಾಡಲಾಗಿದೆ.
ಕಿಸಾನ್ ಸಮ್ಮಾನ್ ನಿಧಿ ಯೋಜನೆ 10 ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುಯಲ್ ಮೂಲಕ ಉದ್ಘಾಟಿಸಿದ್ದಾರೆ. ದೇಶಾದ್ಯಂತ 10.09 ಕೋಟಿ ರೈತರ ಬ್ಯಾಂಕ್ ಖಾತೆಗೆ 20,900 ಕೋಟಿ ರೂಪಾಯಿ ಹಣವನ್ನು ಜಮಾ ಮಾಡಲಾಗಿದೆ.
ವಾರ್ಷಿಕ 6 ಸಾವಿರ ರೂಪಾಯಿಯನ್ನು ತಲಾ 2000 ರೂ.ಗಳಂತೆ 3 ಕಂತಿನಲ್ಲಿ ಪಾವತಿಸಲಾಗುತ್ತದೆ. ರಾಜ್ಯದಲ್ಲಿ 64.52 ಲಕ್ಷ ರೈತರು ಪ್ರಯೋಜನ ಪಡೆದುಕೊಂಡಿದ್ದಾರೆ.