ದಾವಣಗೆರೆ: ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂ ಸರಿಸಮಾನಾದ ವೇತನ ಹಾಗೂ ಭತ್ಯೆ, ಖಾಲಿ ಇರುವ 2.65 ಲಕ್ಷ ಹುದ್ದೆಗಳ ಭರ್ತಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ವಿವಿಧ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಜಾರಿಗೊಳಿಸುವುದು. ಸರ್ಕಾರ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ನಿವೃತ್ತಿಯಿಂದಾಗಿ ಖಾಲಿಯಾಗಿರುವ 2.65 ಲಕ್ಷ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ.
ಅಲ್ಲದೇ ಪ್ರಾಥಮಿಕ/ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳ ಪರಿಹರಿಸುವಂತೆ ಒತ್ತಾಯಿಸಿ ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ ಎನ್. ಲಿಂಗಣ್ಣ ಹಾಗೂ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳ ಗಮನ ಸೆಳೆಯುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.