ಪಣಜಿ : ಹಲವು ರಾಜ್ಯಗಳಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಆತಂಕ ಮನೆ ಮಾಡಿದ್ದು, ಮಹಾಮಾರಿಯ ಮೂರನೇ ಅಲೆ ಭಯ ಶುರುವಾಗಿದೆ. ಹೀಗಾಗಿ ಹಲವು ರಾಜ್ಯಗಳಲ್ಲಿ ಹಲವು ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಸದ್ಯ ಗೋವಾದಲ್ಲಿ ಕೂಡ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನಾಳೆಯಿಂದ ಜ. 26ರ ವರೆಗೂ 8 ಹಾಗೂ 9ನೇ ತರಗತಿಯವರೆಗಿನ ಶಾಲೆಗಳನ್ನು ಮುಚ್ಚಲಾಗಿದೆ. ಅಲ್ಲದೇ, ಕಾಲೇಜುಗಳನ್ನು ಕೂಡ ಮುಚ್ಚಲಾಗುವುದು ಎಂದು ತಿಳಿದು ಬಂದಿದೆ.
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಪ್ರಮೋದ್ ಸಾವಂತ್ ಟಾಸ್ಕ್ ಪೋರ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ, ಶಾಲೆ ಬಂದ್ ಮಾಡುವ ಕುರಿತು ಹೇಳಿದ್ದಾರೆ. ಅಲ್ಲದೇ, ರಾತ್ರಿ ಹೊತ್ತು ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಕೂಡ ಹೇಳಿದ್ದಾರೆ.
ಗೋವಾ ರಾಜ್ಯದಲ್ಲಿ ಭಾನುವಾರ 388 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಓರ್ವ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆ. ಅಲ್ಲಿನ ಪಾಸಿಟಿವಿಟಿ ದರ ಶೇ. 5ರಷ್ಟಿದ್ದು, ರಾತ್ರಿ 11 ರಿಂದ ಬೆಳಿಗ್ಗೆ 6ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗುವುದು ಎಂದು ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯ ಶೇಖರ್ ಸಲ್ಕಾರ್ ಹೇಳಿದ್ದಾರೆ.