ನವದೆಹಲಿ: ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದು ಮಾಡಲಾಗಿದೆ. ಕೊರೋನಾ ಸೋಂಕು ಏರಿಕೆಯಾದ ಕಾರಣದಿಂದಾಗಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಮುಂದಿನ ಆದೇಶದವರೆಗೂ ಬಯೋಮೆಟ್ರಿಕ್ ಹಾಜರಾತಿ ರದ್ದು ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ಕೊರೋನಾ ಮತ್ತು ಒಮಿಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಆದೇಶದವರೆಗೂ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.
ಸರ್ಕಾರಿ ನೌಕರರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳು ಮತ್ತು ಅದರ ಹೊಸ ರೂಪಾಂತರ ಒಮಿಕ್ರಾನ್ ಮಧ್ಯೆ ಕೇಂದ್ರದಿಂದ ಮುಂದಿನ ಆದೇಶದವರೆಗೆ ಸರ್ಕಾರವು ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಸ್ಥಗಿತಗೊಳಿಸಲಾಗಿದೆ.