ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ವರದಿ ಬಂದಿದೆ. ಸೌಮ್ಯ ರೋಗ ಲಕ್ಷಣಗಳಿವೆ ಎಂದು ಅವರು ಹೇಳಿದ್ದಾರೆ.
ಅವರು ಕೋವಿಡ್ ಪಾಸಿಟಿವ್ ಪರೀಕ್ಷೆ ವರದಿ ಬಂದಿದ್ದರಿಂದ ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದಾರೆ. ನಾನು ಕೋವಿಡ್ ಪರೀಕ್ಷೆ ಮಾಡಿಸಿದಾಗ ಧನಾತ್ಮಕ ಪರೀಕ್ಷೆ ವರದಿ ಬಂದಿದೆ. ಸೌಮ್ಯ ಲಕ್ಷಣ ಇದೆ. ಮನೆಯಲ್ಲಿ ಐಸೋಲೇಟ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.