alex Certify ಹೆಚ್ಚಿದ ಡೆಡ್ಲಿ ವೈರಸ್​ ಆರ್ಭಟ: ಪಂಜಾಬ್​​ನಲ್ಲಿ ಇಂದಿನಿಂದ ನೈಟ್​ ಕರ್ಫ್ಯೂ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚಿದ ಡೆಡ್ಲಿ ವೈರಸ್​ ಆರ್ಭಟ: ಪಂಜಾಬ್​​ನಲ್ಲಿ ಇಂದಿನಿಂದ ನೈಟ್​ ಕರ್ಫ್ಯೂ ಜಾರಿ

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳು ಒಂದೊಂದಾಗಿಯೇ ನೈಟ್​ ಕರ್ಫ್ಯೂವನ್ನು ಜಾರಿಗೆ ತರುತ್ತಿವೆ.

ಇದೀಗ ಈ ಸಾಲಿಗೆ ಪಂಜಾಬ್​ ಕೂಡ ಸೇರ್ಪಡೆಯಾಗಿದ್ದು ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್​ ಕರ್ಫ್ಯೂವನ್ನು ವಿಧಿಸಲು ನಿರ್ಧರಿಸಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಮಿಕ್ಕೆಲ್ಲ ಸೇವೆಗಳಿಗೆ ಈ ಅವಧಿಯಲ್ಲಿ ನಿರ್ಬಂಧ ಹೇರಲಾಗಿದೆ.

ನೈಟ್​ ಕರ್ಫ್ಯೂ ಜೊತೆಯಲ್ಲಿ ಮಾಸ್ಕ್​​ ಬಳಕೆ , ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ವಿವಿಧ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ.

ತುರ್ತು ಸೇವೆಗಳು ಸೇರಿದಂತೆ ಕೈಗಾರಿಕೆಗಳಲ್ಲಿ ವಿವಿಧ ಶಿಫ್ಟ್​ಗಳಲ್ಲಿ ಕೆಲಸ ಮಾಡುವವರಿಗೆ, ಬಸ್​ ಹಾಗೂ ರೈಲುಗಳಲ್ಲಿ ಪ್ರಯಾಣಿಸಿ ನಿಲ್ದಾಣ ತಲುಪುವವರು ಮನೆಗೆ ತೆರಳಲು ಸಾರಿಗೆ ಸೌಲಭ್ಯ ಹೊಂದಲು ಅವಕಾಶ ನೀಡಲಾಗಿದೆ.

ಶಾಲಾ – ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಬಂದ್​ ಮಾಡಿ ಆದೇಶ ಹೊರಡಿಸಲಾಗಿದೆ. ಎಲ್ಲಾ ಮೆಡಿಕಲ್ ಹಾಗೂ ನರ್ಸಿಂಗ್​ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...