ಆಸ್ಟ್ರೇಲಿಯಾದ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿ ಬಿಗ್ ಬ್ಯಾಷ್ ಲೀಗ್(BBL) ಫ್ರಾಂಚೈಸ್ ಮೆಲ್ಬೋರ್ನ್ ಸ್ಟಾರ್ಸ್ ನಾಯಕ ಗ್ಲೆನ್ ಮ್ಯಾಕ್ಸ್ ವೆಲ್ ಅವರಿಗೆ COVID-19 ಪಾಸಿಟಿವ್ ವರದಿ ಬಂದಿದೆ.
ಈ ಮೂಲಕ ಬಿಗ್ ಬ್ಯಾಷ್ ಲೀಗ್ ನಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಮೆಲ್ಬರ್ನ್ ಸ್ಟಾರ್ಸ್ ತಂಡದ ನಾಯಕ ಮ್ಯಾಕ್ಸ್ ವೆಲ್ ಸೇರಿ ತಂಡದ ಒಟ್ಟು 20 ಜನರಿಗೆ ಕೊರೊನಾ ಸೋಂಕು ತಗುಲಿದೆ. 12 ಆಟಗಾರರು 8 ಸಿಬ್ಬಂದಿಗೆ ಸೋಂಕು ತಗುಲಿದೆ.
ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧದ ಪಂದ್ಯದ ನಂತರ ಮ್ಯಾಕ್ಸ್ ವೆಲ್ ಪರೀಕ್ಷೆ ಮಾಡಿದ್ದು, ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಪ್ರಸ್ತುತ ಪ್ರತ್ಯೇಕ ವಾಸದಲ್ಲಿದ್ದಾರೆ. ಮ್ಯಾಕ್ಸ್ ವೆಲ್ ತಮ್ಮ ಕೊನೆಯ ಎರಡು ಪಂದ್ಯಗಳಲ್ಲಿ ಪರ್ತ್ ಸ್ಕಾರ್ಚರ್ಸ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧ ಮೆಲ್ಬೋರ್ನ್ ಸ್ಟಾರ್ಸ್ ಮುನ್ನಡೆಸಿದ್ದರು.
ಹಲವಾರು ಆಟಗಾರರು COVID-19 ಪಾಸಿಟಿವ್ ಬಂದ ಕಾರಣ ಪಂದ್ಯಾವಳಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗಿದೆ.