alex Certify BREAKING: ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಪಾಕಿಸ್ತಾನಿ ಪ್ರಜೆ ಸೇರಿ ಮೂವರು ಜೆಇಎಂ ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಪಾಕಿಸ್ತಾನಿ ಪ್ರಜೆ ಸೇರಿ ಮೂವರು ಜೆಇಎಂ ಉಗ್ರರು ಫಿನಿಶ್

ಶ್ರೀನಗರ: ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್ಕೌಂಟರ್ ನಡೆಸಲಾಗಿದೆ.

ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾಪಡೆಗಳು ಕಾರ್ಯಾಚರಣೆ ತೀವ್ರಗೊಳಿಸುವುದರೊಂದಿಗೆ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.

ಜೈಷ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಪುಲ್ವಾಮಾ ಜಿಲ್ಲೆಯ ಚಂದಗಾಮ್ ನಲ್ಲಿ ಹತ್ಯೆ ಮಾಡಲಾಗಿದೆ. ಇವರಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆಯಾಗಿದ್ದಾನೆ. ಘಟನೆಯ ಸ್ಥಳದಲ್ಲಿ 2  M-4 ಕಾರ್ಬೈನ್‌ಗಳು ಮತ್ತು 1 AK ಸರಣಿ ರೈಫಲ್, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...