ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಇಬ್ಬರು ಭಾರತೀಯ ಬೌಲರ್ ಗಳು 10ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಈ ಎರಡೂ ಟೆಸ್ಟ್ ನಲ್ಲಿ ಭಾರತೀಯ ಬೌಲರ್ ಗಳು ಪಾರಮ್ಯ ಮೆರೆದಿದ್ದಾರೆ. ಹೀಗಾಗಿಯೇ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಕೂಡ ಇಬ್ಬರು ಭಾರತೀಯರು ಲಗ್ಗೆಯಿಟ್ಟಿದ್ದಾರೆ.
ಭಾರತೀಯ ತಂಡದ ವೇಗದ ಬೌಲರ್ ಜಸ್ ಪ್ರೀತ್ ಬುಮ್ರಾ ತಮ್ಮ ಸ್ಥಾನವನ್ನು 10 ರೊಳಗೆ ಖಚಿತಪಡಿಸಿಕೊಂಡಿದ್ದಾರೆ. 12ನೇ ಸ್ಥಾನದಲ್ಲಿದ್ದ ಅವರು ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ 5 ವಿಕೆಟ್ ಪಡೆದು 9ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಲೆಗ್ ಸ್ಪಿನ್ನರ್ ಆರ್. ಅಶ್ವಿನ್ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಅಲ್ಲದೇ, ಮೊದಲ ಟೆಸ್ಟ್ ನಲ್ಲಿ 8 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೊಹಮ್ಮದ್ ಶಮಿ ಕೂಡ ತಮ್ಮ ಸ್ಥಾನ ಉತ್ತಮ ಪಡಿಸಿಕೊಂಡು 17ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದಾರೆ. ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಐದನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಇಳಿದಿದ್ದಾರೆ. ರೋಹಿತ್ ಶರ್ಮಾ 5ನೇ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ.