ಮೈಸೂರು: ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಸಿಮ್ಸ್ ಮುಖ್ಯ ವೈದ್ಯರೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಡಾ.ಮಹೇಶ್ವರ ಅಮಾನತುಗೊಂಡಿರುವ ವೈದ್ಯ. ವಾರದ ಹಿಂದೆ ಡಾ.ಮಹೇಶ್ವರ ನರ್ಸಿಂಗ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್ ಡಾ.ಸಂಜೀವ್, ಮಹೇಶ್ವರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.