alex Certify BIG BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್; ಇದೇ ಮೊದಲ ಬಾರಿಗೆ ʼಸುವಿಧಾʼ ಆಪ್‌ ಮೂಲಕ ಆನ್‌ ಲೈನ್‌ ನಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್; ಇದೇ ಮೊದಲ ಬಾರಿಗೆ ʼಸುವಿಧಾʼ ಆಪ್‌ ಮೂಲಕ ಆನ್‌ ಲೈನ್‌ ನಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ

ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಗೊಂಡಿದ್ದು, ನವದೆಹಲಿಯ‌ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, 5 ರಾಜ್ಯಗಳಾದ ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು. ಕೋವಿಡ್ ಸಂದರ್ಭದಲ್ಲಿ ಚುನಾವಣೆ ಒಂದು ಸವಾಲು. ಕೋವಿಡ್ ಮಾರ್ಗಸೂಚಿಯನ್ನು ಅಳವಡಿಸಿಕೊಂಡು ಚುನಾವಣೆ ನಡೆಸಲಾಗುವುದು. ಅವಧಿಗೂ ಮುನ್ನ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ ಎಂದರು.

ಒಟ್ಟು 690 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 5 ರಾಜ್ಯಗಳಲ್ಲಿ 18.3 ಕೋಟಿ ಮತದಾರರಿದ್ದಾರೆ. 24.9 ಲಕ್ಷ ಮತದಾರರು ಮೊದಲ ಬಾರಿ ಹಕ್ಕು ಚಲಾಯಿಸಲಿದ್ದಾರೆ. ಚುನಾವಣೆಗಾಗಿ ಪೂರ್ವತಯಾರಿ ನಡೆದಿದೆ. ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಆರೋಗ್ಯಾಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ಕೈಗೊಂಡು ಚುನಾವಣೆ ನಡೆಸಲಾಗುವುದು. ವಿಕಲಚೇತನರು, ಕೋವಿಡ್ ಸೋಂಕಿತರಿಗೆ ವಿಶೇಷ ವ್ಯವಸ್ಥೆ ಮಾಡಲಾಗುವುದು. 80 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಮನೆಯಿಂದಲೇ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಬಹುದು ಎಂದು ಹೇಳಿದರು.

ಒಟ್ಟು 690 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 5 ರಾಜ್ಯಗಳಲ್ಲಿ 18.3 ಕೋಟಿ ಮತದಾರರಿದ್ದಾರೆ. 24.9 ಲಕ್ಷ ಮತದಾರರು ಮೊದಲ ಬಾರಿ ಹಕ್ಕು ಚಲಾಯಿಸಲಿದ್ದಾರೆ. ಚುನಾವಣೆಗಾಗಿ ಪೂರ್ವತಯಾರಿ ನಡೆದಿದೆ. ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಆರೋಗ್ಯಾಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ಕೈಗೊಂಡು ಚುನಾವಣೆ ನಡೆಸಲಾಗುವುದು. ವಿಕಲಚೇತನರು, ಕೋವಿಡ್ ಸೋಂಕಿತರಿಗೆ ವಿಶೇಷ ವ್ಯವಸ್ಥೆ ಮಾಡಲಾಗುವುದು. 80 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಮನೆಯಿಂದಲೇ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಬಹುದು ಎಂದು ಹೇಳಿದರು.

5 ರಾಜ್ಯಗಳಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಬಗ್ಗೆ ಪ್ರಕಟಿಸಬೇಕು. ಚುನಾವಣೆಯಲ್ಲಿ ಮದ್ಯ, ಹಣಬಲ, ಕಾನೂನು ಉಲ್ಲಂಘನೆಯ ಮೇಲೆ ತೀವ್ರ ನಿಗಾವಹಿಸಲಾಗುವುದು. ಎಲ್ಲಾ ರಾಜಕೀಯ ಪಕ್ಷಗಳಿಗಾಗಿ ಸುವಿಧಾ ಆಪ್ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ ಲೈನ್ ಮೂಲಕವೂ ನಾಮಪತ್ರ ಸಲ್ಲಿಸಬಹುದು. ಚುನಾವಣಾ ಸಿಬ್ಬಂದಿಗಳಿಗೆ 2 ಡೋಸ್ ಲಸಿಕೆ ಕಡ್ಡಾಯ. ಜನವರಿ 15ರವರೆಗೆ ರ್ಯಾಲಿ, ರೋಡ್ ಶೋ, ಪಾದಯಾತ್ರೆ, ರಾಜಕೀಯ ಸಮಾವೇಶ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಮನೆ ಮನೆ ಪ್ರಚಾರದಲ್ಲಿ 5 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶ ಎಂದರು.

ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಮೊದಲ ಹಂತದಲ್ಲಿ ಫೆ.10 ರಂದು ಮತದಾನ ನಡೆಯಲಿದೆ. ಫೆ.14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಫೆ.20 ಮೂರನೇ ಹಂತದ ಮತದಾನ, ಫೆ.23 ನಾಲ್ಕನೇ ಹಂತ, ಫೆ. 27ರಂದು 5ನೇ, ಮಾರ್ಚ್ 3ರಂದು 6ನೇ ಹಾಗೂ ಮಾರ್ಚ್ 7ರಂದು 7ನೇ ಹಂತದ ಮತದಾನ ನಡೆಯಲಿದೆ.

ಮಣಿಪುರದಲ್ಲಿ ಎರಡು ಹಂತದಲ್ಲಿ, ಗೋವಾ, ಉತ್ತರಾಕಾಂಡ್‌ ಮತ್ತು ಪಂಜಾಬ್‌ ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪಂಜಾಬ್, ಉತ್ತರಾಖಂಡ್, ಗೋವಾದಲ್ಲಿ ಫೆ.14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ಫೆ. 27 ರಂದು ಮೊದಲ, ಮಾ.3 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಮಾರ್ಚ್ 10ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ. ಸಧ್ಯ ಚುನಾವಣಾ ಆಯೋಗ ಪಂಚರಾಜ್ಯಗಳ ಚುನಾವಣೆ ದಿನಾಂಕವನ್ನು ಮಾತ್ರ ಘೋಷಿಸಿದೆ.

ಕೊರೊನಾ, ಒಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಎದುರಾಗಿರುವ ಪಂಚರಾಜ್ಯಗಳ ಚುನಾವಣೆ ನಿರ್ಣಾಯಕವಾಗಿದ್ದು, ಅದರಲ್ಲಿಯೂ ಪಂಜಾಬ್ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿರುವುದರಿಂದ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಳ್ಳುವ ಜತೆಗೆ ಪಂಜಾಬ್ ನಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಷ್ಠೆಯ ಅಖಾಡವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...