ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯನ್ನು ಸ್ವಾಗತಿಸಿದ್ದು, ಬಿಜೆಪಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಉತ್ತರ ಪ್ರದೇಶದಲ್ಲಿ 7 ಹಂತದ ಮತದಾನ ಘೋಷಿಸಿದೆ. ಮತಗಳ ಎಣಿಕೆಯು ಮಾರ್ಚ್‌ನಲ್ಲಿ ನಡೆಯಲಿದೆ, ಜೊತೆಗೆ ನಾಲ್ಕು ಇತರ ಚುನಾವಣೆಗೆ ಒಳಪಟ್ಟ ರಾಜ್ಯಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ.
ನಾವು ಪ್ರಜಾಪ್ರಭುತ್ವದ ಹಬ್ಬವನ್ನು ಸ್ವಾಗತಿಸುತ್ತೇವೆ. ಜನರ ಆಶೀರ್ವಾದ ಮತ್ತು ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಆಧಾರದ ಮೇಲೆ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ತನ್ನ ಸರ್ಕಾರವನ್ನು ರಚಿಸುತ್ತದೆ ಎಂದು ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7 ರಂದು ಚುನಾವಣೆ ನಡೆಯಲಿದೆ. ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದೊಂದಿಗೆ ಉತ್ತರ ಪ್ರದೇಶದ ಮತ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.
ರಾಜಕೀಯವಾಗಿ ನಿರ್ಣಾಯಕ ರಾಜ್ಯದಲ್ಲಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.