alex Certify ಜಿಲ್ಲೆಗಳಲ್ಲೂ ಕೊರೋನಾ ಹೆಚ್ಚಳ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲ್ಲೆಗಳಲ್ಲೂ ಕೊರೋನಾ ಹೆಚ್ಚಳ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,39,958 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,366 ಜನ ಸಾವನ್ನಪ್ಪಿದ್ದಾರೆ. ಇಂದು 508 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,63,065 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 5.42 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 7113 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 323 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 32,157 ಸಕ್ರಿಯ ಪ್ರಕರಣಗಳಿವೆ.

ಹಾವೇರಿ, ಯಾದಗಿರಿ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಏರಿಕೆ ಕಂಡಿದೆ. ಬೆಂಗಳೂರು ಗ್ರಾಮಾಂತರ 111, ಬೆಂಗಳೂರು ನಗರ 7113, ದಕ್ಷಿಣಕನ್ನಡ 295, ಹಾಸನ 139, ಮಂಡ್ಯ 183, ಮೈಸೂರು 203, ಉಡುಪಿ 186 ಹೊಸ ಕೇಸ್ ದಾಖಲಾಗಿವೆ. ಬೆಂಗಳೂರಿನಲ್ಲಿ 3, ಕಲ್ಬುರ್ಗಿಯಲ್ಲಿ 1 ಸೇರಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...