alex Certify ಸರ್ಕಾರಿ ನೌಕರರ ವೇತನ ಶೇ. 23 ರಷ್ಟು ಹೆಚ್ಚಳ, ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ವೇತನ ಶೇ. 23 ರಷ್ಟು ಹೆಚ್ಚಳ, ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ

ಅಮರಾವತಿ: ಸರ್ಕಾರಿ ನೌಕರರ ವೇತನವನ್ನು ಶೇಕಡ 23.29 ರಷ್ಟು ಏರಿಕೆ ಮಾಡಿರುವ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ವಿಸ್ತರಿಸಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ವೇತನ ಪರಿಷ್ಕರಣೆ ಬಗ್ಗೆ ಘೋಷಣೆ ಮಾಡಿದ್ದಾರೆ.

ಇದರೊಂದಿಗೆ ಮುಖ್ಯಕಾರ್ಯದರ್ಶಿ ನೇತೃತ್ವದ ಸಮಿತಿ ಶಿಫಾರಸುಗಳನ್ನು ಮೀರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗಿದೆ. ವೇತನ ಪರಿಷ್ಕರಣೆಯಿಂದ ವಾರ್ಷಿಕ 10,247 ಕೋಟಿ ರೂಪಾಯಿ ಹೊರೆಯಾಗಲಿದೆ. 2020 ರ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಆರ್ಥಿಕ ಸೌಲಭ್ಯ ಜಾರಿಯಾಗಲಿದೆ. ಇನ್ನು ಮುಂದೆ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಂಧ್ರಪ್ರದೇಶದಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಪರಿಗಣಿಸಲಾಗುವುದು ಎಂದು ಸಿಎಂ ಜಗನ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...