ಬೆಂಗಳೂರು: ಪಡಿತರ ಚೀಟಿ ಇಲ್ಲದೆ ಸರ್ಕಾರಿ ಸೌಲಭ್ಯ ಪಡೆಯಲು ತೊಂದರೆ ಅನುಭವಿಸಿದವರಿಗೆ ಸಿಹಿ ಸುದ್ದಿ ಇಲ್ಲಿದೆ.
ಹೊಸ ಪಡಿತರ ಚೀಟಿಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಅನುಮತಿ ನೀಡಲಾಗಿದೆ. ಸುಮಾರು ನಾಲ್ಕು ವರ್ಷಗಳಿಂದ ಚುನಾವಣೆ, ಕೊರೋನಾ ಇತರೆ ಕಾರಣದಿಂದ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.
ಈಗ 2.96 ಲಕ್ಷ ಅರ್ಜಿದಾರರು ಕಾರ್ಡ್ ಪಡೆಯಲು ಅರ್ಹರಾಗಿದ್ದಾರೆ. ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ 1.80 ಲಕ್ಷ ಅರ್ಜಿಗಳನ್ನು ಅನರ್ಹವೆಂದು ಗುರುತಿಸಲಾಗಿದೆ. ಆಧಾರ್ ಕಾರ್ಡ್, ವಾರ್ಷಿಕ ಆದಾಯ ಮತ್ತು ವಾಸಸ್ಥಳ ದೃಢೀಕರಣ ಪತ್ರ ಸಲ್ಲಿಸಿ ರೇಷನ್ ಕಾರ್ಡ್ ಪಡೆಯಬಹುದು ಎಂದು ಹೇಳಲಾಗಿದೆ.