ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ತರಗತಿಗಳು ನಡೆಯದ ಕಾರಣ ಆಹಾರಧಾನ್ಯ ವಿತರಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಕ್ಕಳಿಗೆ ತರಗತಿಗಳು ನಡೆಯದ ಕಾರಣ ಈ ಅವಧಿಯ ಆಹಾರಧಾನ್ಯಗಳನ್ನು ವಿತರಿಸುವಂತೆ ಸೂಚನೆ ನೀಡಲಾಗಿದೆ.
ಬಿಸಿಯೂಟದ ಬದಲಿಗೆ ಆಹಾರ ಭದ್ರತಾ ಕಾಯ್ದೆ, ಮಧ್ಯಾಹ್ನ ಉಪಾಹಾರ ಯೋಜನೆ ನಿಯಮಗಳನ್ವಯ ಆಹಾರಧಾನ್ಯ ವಿತರಿಸಲಾಗುವುದು. ಸೆಪ್ಟೆಂಬರ್ನಲ್ಲಿ 25 ದಿನ ಮತ್ತು ಅಕ್ಟೋಬರ್ ನಲ್ಲಿ 16 ದಿನಗಳ ಆಹಾರಧಾನ್ಯವನ್ನು ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ನೀಡಲಾಗುವುದು ಎಂದು ಹೇಳಲಾಗಿದೆ.