ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಎಂ. ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕರಿಗೆ ಕೋವಿಡ್ ಭೀತಿ ಶುರುವಾಗಿದೆ.
ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಆರಂಭಿಸಿದ್ದಾರೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಾವಿರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಹೆಚ್.ಎಂ. ರೇವಣ್ಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವರಿಗೆ ಸೋಂಕಿನ ಬೆನ್ನಲ್ಲೇ ಅವರ ಸಂಪರ್ಕದಲ್ಲಿದ್ದ ಕಾಂಗ್ರೆಸ್ ನ ಹಲವು ನಾಯಕರಿಗೂ ಕೊರೊನಾ ಆತಂಕ ಶುರುವಾಗಿದ್ದು, ಪಾದಯಾತ್ರೆಯಲ್ಲಿಯೂ ಸೋಂಕು ಹರಡಿರುವ ಸಾಧ್ಯತೆ ದಟ್ಟವಾಗಿದೆ.