ಧಾರವಾಡ: ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹರಡುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕ ಸಿಬ್ಬಂದಿಗಳು ವೈರಸ್ ದಾಳಿಗೆ ಒಳಗಾಗುತ್ತಿದ್ದಾರೆ. ಈ ನಡುವೆ ಒಂದೇ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢಶಾಲೆಯ 11 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಇನ್ನುಳಿದ ವಿದ್ಯಾರ್ಥಿಗಳು, ಶಿಕ್ಷಕರಲ್ಲಿಯೂ ಆತಂಕ ಎದುರಾಗಿದೆ.
ಮತ್ತೊಂದೆಡೆ ಚಿಕ್ಕಬಳ್ಳಾಪುರದ ಸರ್ಕಾರಿ ಶಾಲೆಯ ಅಡಿಗೆ ಸಹಾಯಕಿಯೊಬ್ಬರಿಗೆ ಕೊರೊನಾ ಸೋಂಕು ಹರಡಿದ್ದು, ಶಾಲೆಗೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.