ಶಿವಮೊಗ್ಗ: ಇ – ಸ್ವತ್ತಿನ ಆಸ್ತಿ ಖರೀದಿ ಪತ್ರ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮ ಪಂಚಾಯಿತಿ ಪಿಡಿಒ ಎಸಿಬಿ ಬಲೆಗೆ ಬಿದ್ದಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಪಿಡಿಒ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಎಸಿಬಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.