ಮಡಿಕೇರಿ: ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು.
ಕೊಡಗು ಜಿಲ್ಲೆಯಲ್ಲಿರುವ 11 ಶಾಲೆಗೆ ಒಬ್ಬರಂತೆ 11 ಮಂದಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ನಿಗದಿಪಡಿಸಿದ ಗುರಿಗೆ ಅರ್ಜಿ ಸ್ವೀಕೃತಗೊಂಡಿರುವುದಿಲ್ಲ. ಆದ್ದರಿಂದ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಜನವರಿ 17 ರ ವರೆಗೆ ಕಾಲಾವಕಾಶ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ 7,500 ರೂ.ನಿಗದಿಪಡಿಸಿದೆ. ಇಂಗ್ಲೀಷ್ ಭೋದನಾ ಸಾಮರ್ಥ್ಯವಿರುವ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಬೋಧನೆ ಮಾಡಿದ ಪದವಿ ಮತ್ತು ಬಿಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಮೊದಲ ಆದ್ಯತೆ ನೀಡಲಾಗುವುದು. ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-200500 ಮೊ.ನಂ. 9945986995 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.